ವೈದ್ಯಕೀಯ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಎನ್ಇಇಟಿ)ಯಲ್ಲಿನ ಅಕ್ರಮಗಳು ಮತ್ತು ಹಗರಣಗಳ ಬಗ್ಗೆ ವಿದ್ಯಾರ್ಥಿಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳು ಜೂ.19 ಮತ್ತು 20ರಂದು ಎರಡು ದಿನಗಳ ಕಾಲ ದೇಶಾದ್ಯಂತ ಮುಷ್ಕರಕ್ಕೆ ಶನಿವಾರದಂದು ಕರೆ ನೀಡಿದೆ.
ನ್ಯೂಡೆಲ್ಲಿ : ವೈದ್ಯಕೀಯ ಪ್ರವೇಶಕ್ಕಾಗಿ ನಡೆಸಿದ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಎನ್ಇಇಟಿ)ಯಲ್ಲಿನ ಅಕ್ರಮಗಳು ಮತ್ತು ಹಗರಣಗಳ ಬಗ್ಗೆ ವಿದ್ಯಾರ್ಥಿಗಳು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಎಡ ವಿದ್ಯಾರ್ಥಿ ಸಂಘಟನೆಗಳು ಜೂ.19 ಮತ್ತು 20ರಂದು ಎರಡು ದಿನಗಳ ಕಾಲ ದೇಶಾದ್ಯಂತ ಮುಷ್ಕರಕ್ಕೆ ಶನಿವಾರದಂದು ಕರೆ ನೀಡಿದೆ. ಹಿಂದೆಂದೂ ಕಂಡಿರದ ರೀತಿಯಲ್ಲಿ NEET ನಲ್ಲಿ ದಾಖಲೆಯ ಸ್ತಾಯಿಯಲ್ಲಿ 67 ಮಂದಿ ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳನ್ನು ಗಳಿಸಿದ್ದಾರೆ. ಹರಿಯಾಣದ ಒಂದೇ ಪರೀಕ್ಷಾ ಕೇಂದ್ರದಲ್ಲಿ ಹೆಚ್ಚಿನ ಅಭ್ಯರ್ಥಿಗಳು ನೀಟ್ ಬರೆದಿದ್ದಾರೆ. ಇದರಿಂದ ಚೀಟಿಂಗ್ ಅಥವಾ ಪೇಪರ್ ಸೋರಿಕೆಯಿಂದ ಹೆಚ್ಚು ಅಂಕ ಪಡೆದಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಅಲ್ಲದೆ ಕೆಲವು ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳನ್ನು ನೀಡಿರುವುದರ ಬಗ್ಗೆ ಇತರೆ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.
ಈ ಮಧ್ಯೆ, ಪರೀಕ್ಷೆ ನಡೆಸಿದ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (ಎನ್ಟಿಎ)ಯಲ್ಲಿನ ಭ್ರಷ್ಟಾಚಾರ ಮತ್ತು ಅಕ್ರಮ ದುರ್ಬಳಕೆಯ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶಗೊಂಡಿದ್ದಾರೆ. ಈ ಬಗ್ಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮೌನ ವಹಿಸಿದ್ದಾರೆ ಎಂದು ವಿಧ್ಯಾರ್ಥಿಗಳು ಆರೋಪಿಸಿದ್ದಾರೆ. ನೀಟ್ ಪರೀಕ್ಷೆಯನ್ನು ರದ್ದುಪಡಿಸಿ ಮರು ಪರೀಕ್ಷೆ ನಡೆಸಬೇಕು ಹಾಗೂ ಎನ್ ಟಿಎ ರದ್ದತಿ ಕುರಿತು ಸ್ವತಂತ್ರ ತನಿಖೆ ನಡೆಸಬೇಕು ಎಂದು ಅಖಿಲ ಭಾರತ ವಿದ್ಯಾರ್ಥಿಗಳ ಸಂಘಟನೆ (ಎಐಎಸ್ ಎ) ಆಗ್ರಹಿಸಿದೆ. ಜೂನ್ 19 ಮತ್ತು 20 ರಂದು ದೇಶಾದ್ಯಂತ ಮುಷ್ಕರಕ್ಕೆ ಕರೆ ನೀಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಈ ಮುಷ್ಕರದಲ್ಲಿ ಭಾಗವಹಿಸಬೇಕಾಗಿ ವಿನಂತಿಸಿದೆ.
ಮತ್ತೊಂದೆಡೆ, ವೈದ್ಯಕೀಯ ಪ್ರವೇಶ ಪರೀಕ್ಷೆಗೆ ಹಾಜರಾಗಿದ್ದ 20 ಮಂದಿ ವಿದ್ಯಾರ್ಥಿಗಳ ಗುಂಪು NEET-UG 2024 ಪರೀಕ್ಷೆಯನ್ನು ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ನಲ್ಲಿ ಶನಿವಾರ ಪಿಟಿಷನ್ ದಾಖಲಿಸಿದೆ. ಸುಪ್ರೀಂ ಕೋರ್ಟ್ ಈಗಾಗಲೇ ಈ ವಿಷಯದ ಕುರಿತು ಸಲ್ಲಿಸಲಾದ ಇತರೆ ಅರ್ಜಿಗಳ ವಿಚಾರಣೆ ನಡೆಸುತ್ತಿದೆ.
Leave a reply