ನ್ಯೂಡೆಲ್ಲಿ : ಕೋಲ್ಕತ್ತಾ ಆಸ್ಪತ್ರೆಯಲ್ಲಿ ಟ್ರೈನಿಂಗ್ ವೈದ್ಯೆಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಮತ್ತು ಹತ್ಯೆಯನ್ನು ಪ್ರತಿಭಟಿಸಿ, ಆರ್ಜಿ ಕಾರ್ ಮೆಡಿಕಲ್ ಕಾಲೇಜು ಆಸ್ಪತ್ರೆಯ ವೈದ್ಯರು ಮತ್ತು ವಿದ್ಯಾರ್ಥಿಗಳು ಒಗ್ಗಟ್ಟಿನಿಂದ ದೇಶಾದ್ಯಂತ ಮುಷ್ಕರಕ್ಕೆ ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (FORDA) ಕರೆ ನೀಡಿದೆ. ತುರ್ತು ಸೇವೆಗಳನ್ನು ಹೊರತುಪಡಿಸಿ, ದೇಶಾದ್ಯಂತದ ಆಸ್ಪತ್ರೆಗಳಲ್ಲಿನ ಎಲ್ಲಾ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಅತ್ಯಂತ ಕಠಿಣ ಪರಿಸ್ಥಿತಿಯ ನಡುವೆ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದೆ.
ಆರ್ಜಿ ಕಾರ್ನಲ್ಲಿರುವ ತಮ್ಮ ಸಹೋದ್ಯೋಗಿಗಳಿಗೆ ಬೆಂಬಲವಾಗಿ, ಸೋಮವಾರ ದೇಶಾದ್ಯಂತ ಆಸ್ಪತ್ರೆಗಳಲ್ಲಿ ಸೇವೆಗಳನ್ನು ಸ್ಥಗಿತಗೊಳಿಸುವುದಾಗಿ ಘೋಷಿಸುತ್ತಿರುವುದಾಗಿ. “ಈ ನಿರ್ಧಾರವನ್ನು ಲಘುವಾಗಿ ತೆಗೆದುಕೊಳ್ಳಲಾಗಿಲ್ಲ, ನ್ಯಾಯ ಮತ್ತು ಭದ್ರತೆಗಾಗಿ ಎತ್ತಲಾದ ಬೇಡಿಕೆಗಳ ಸಾಕ್ಷಾತ್ಕಾರದಲ್ಲಿ ಯಾವುದೇ ವಿಳಂಬವಾಗದಂತೆ ನೋಡಿಕೊಳ್ಳಲು ಇದು ಅಗತ್ಯ ಕ್ರಮವಾಗಿದೆ” ಎಂದು ಎಫ್ಓಆರ್ಡಿಎ ಹೇಳಿಕೆಯೊಂದರಲ್ಲಿ ತಿಳಿಸಿದೆ.
ಈ ಸಂದರ್ಭದಲ್ಲಿ ಎಫ್ಓಆರ್ಡಿಎ ಐದು ಬೇಡಿಕೆಗಳನ್ನು ಮುಂದಿಟ್ಟಿದೆ.
ಆರ್.ಜಿ.ಕರ್ ವೈದ್ಯಕೀಯ ಕಾಲೇಜು ಆಸ್ಪತ್ರೆ ವೈದ್ಯರ ಬೇಡಿಕೆಗಳನ್ನು ಅಂಗೀಕರಿಸಿ ಶೀಘ್ರ ಕ್ರಮಕೈಗೊಳ್ಳಬೇಕು. ಹಾಗೂ ಪ್ರತಿಭಟನಾ ನಿರತ ವೈದ್ಯರ ಮೇಲೆ ಪೊಲೀಸ್ ದೌರ್ಜನ್ಯವನ್ನು ನಿಲ್ಲಿಸಬೇಕು. ಶಾಂತಿಯುತವಾಗಿ ಪ್ರತಿಭಟನೆ ಮಾಡುವ ಹಕ್ಕನ್ನು ಗೌರವಿಸಬೇಕು ಎಂದು ಒತ್ತಾಯಿಸಿದೆ. ಈ ಪ್ರಕರಣದ ವಿಚಾರಣೆಯನ್ನು ತ್ವರಿತವಾಗಿ ನಡೆಸಬೇಕು. ಸಂತ್ರಸ್ತೆಯ ಕುಟುಂಬಕ್ಕೆ ನ್ಯಾಯ ಮತ್ತು ಸೂಕ್ತ ಪರಿಹಾರ ನೀಡಬೇಕು ಮತ್ತು ದೇಶದಾದ್ಯಂತ ಎಲ್ಲಾ ಆಸ್ಪತ್ರೆಗಳಲ್ಲಿ ಆರೋಗ್ಯ ಮತ್ತು ಸಿಬ್ಬಂದಿ ಸುರಕ್ಷತೆಗಾಗಿ ಕೇಂದ್ರ ಸರ್ಕಾರವು ಕಡ್ಡಾಯವಾಗಿ ಪ್ರೋಟೋಕಾಲ್ (ಶಿಷ್ಟಾಚಾರ) ಹೊರಡಿಸಬೇಕು ಎಂದು ಒತ್ತಾಯಿಸಿದೆ.

ಇಂದು ಮತ್ತು ನಾಳೆ ಪ್ರತಿಭಟನೆ : ಎಸ್ಎಫ್ಐ
ಕೋಲ್ಕತ್ತಾದಲ್ಲಿ ನಡೆದ ಅಮಾನವೀಯ ಘಟನೆಯನ್ನು ಪ್ರತಿಭಟಿಸಿ ಆಗಸ್ಟ್ 12 ಮತ್ತು 13 ರಂದು ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಭಾರತೀಯ ವಿದ್ಯಾರ್ಥಿ ಫೆಡರೇಶನ್ (SFI) ಕರೆ ನೀಡಿದೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಎಸ್ಎಫ್ಐ ಅಖಿಲ ಭಾರತ ಪ್ರಧಾನ ಕಾರ್ಯದರ್ಶಿ ಮಯೂಖ್ ಬಿಸ್ವಾಸ್ ಈ ವಿಷಯ ತಿಳಿಸಿದ್ದಾರೆ.
ಸಂತ್ರಸ್ತೆಯ ಕುಟುಂಬಕ್ಕೆ ಬೆದರಿಕೆ..
ಕೋಲ್ಕತ್ತಾದಲ್ಲಿ ಟ್ರೈನಿಂಗ್ ವೈದ್ಯೆಯೊಬ್ಬರ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆಗೆ ದೇಶಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಆದರೆ ಈ ಸಂದರ್ಭದಲ್ಲಿ ಸಂತ್ರಸ್ತೆಯ ಕುಟುಂಬದ ಪರವಾಗಿ ಇರಬೇಕಾದ ಪಶ್ಚಿಮ ಬಂಗಾಳದ ಪೊಲೀಸರು ಬೆದರಿಕೆ ಹಾಕುತ್ತಿದ್ದಾರೆ ಎನ್ನಲಾಗಿದೆ.
Leave a reply