ಕೊಪ್ಪ : ಅರಣ್ಯ ಕಾಯ್ದೆಗಳ ಹೆಸರಿನಲ್ಲಿ ರೈತರ ಸಾಗುವಳಿ ಭೂಮಿಯನ್ನು ತೆರವುಗೊಳಿಸಿ, ರೈತರ ಮತ್ತು ನಾಗರಿಕರ ಮೇಲೆ ಅರಣ್ಯ ಇಲಾಖೆಯ ದೌರ್ಜನ್ಯ ಮತ್ತು ಒತ್ತುವರಿ ತೆರವುಗೊಳಿಸುವುದನ್ನು ವಿರೋಧಿಸಿ ‘ಮಲೆನಾಡು ನಾಗರಿಕರ, ರೈತರ ಹಿತರಕ್ಷಣಾ ಸಮಿತಿ’ ಯ ನೇತೃತ್ವದಲ್ಲಿ ಸಾವಿರಾರು ಸಂಖ್ಯೆಯಲ್ಲಿ ರೈತರು, ನಾಗರಿಕರು, ಮಹಿಳೆಯರು, ಆದಿವಾಸಿಗಳು ಮತ್ತು ವಿವಿಧ ರಾಜಕೀಯ ಪಕ್ಷಗಳ ಮುಖಂಡರುಗಳು ಒಗ್ಗಟ್ಟಾಗಿ ಶೃಂಗೇರಿ ವಿಧಾನಸಭಾ ಕ್ಷೇತ್ರ ಕೊಪ್ಪದಲ್ಲಿ ಒತ್ತುವರಿ ತೆರವನ್ನು ಕೂಡಲೇ ನಿಲ್ಲಿಸಬೇಕೆಂದು ಆಗ್ರಹಿಸಿ ಬೃಹತ್ ಪ್ರತಿಭಟನೆಯನ್ನು ನಡೆಸಿದರು.

ಈ ಹಿನ್ನೆಲೆಯಲ್ಲಿ ಇಂದು ಕೊಪ್ಪದಲ್ಲಿ ಬಂದ್ ಸಂಪೂರ್ಣವಾಗಿ ಯಶಸ್ವಿಯಾಯಿತು. ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿತ್ತು. ಆಸ್ಪತ್ರೆ, ಮೆಡಿಕಲ್ ಶಾಪುಗಳನ್ನು ಹೊರತುಪಡಿಸಿ, ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಮುಚ್ಚುವ ಮೂಲಕ ಅಂಗಡಿಗಳ ಮಾಲಿಕರು ಬಂದ್ ಗೆ ಸಹಕರಿಸಿದ್ದರು.

ಅರಣ್ಯ ಕಾಯ್ದೆಗಳು ರೈತರ ಪಾಲಿಗೆ ಮರಣ ಶಾಸನವಾಗಿರುವುದರಿಂದ ರೈತರು ಆತಂಕದಿಂದ ಜೀವನ ಸಾಗಿಸುವಂತಾಗಿದೆ. ರೈತರು ಸಾಗುವಳಿ ಮಾಡುತ್ತಿರುವ ಒತ್ತುವರಿ ಭೂಮಿಯನ್ನು ಅರಣ್ಯ ಇಲಾಖೆ ತೆರವುಗೊಳಿಸುವುದರ ವಿರುದ್ಧ ಮತ್ತು ದೌರ್ಜನ್ಯದ ವಿರುದ್ಧ ರೈತರು ಬೃಹತ್ ಸಂಖ್ಯೆಯಲ್ಲಿ ಇಂದು ಶೃಂಗೇರಿ ಕ್ಷೇತ್ರದಲ್ಲಿ ಬಂದ್ ಆಚರಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಿದರು. ಇದು ಹೀಗೆ ಮುಂದುವರಿದರೆ.. ಮುಂದಿನ ದಿನಗಳಲ್ಲಿ ದೆಹಲಿ, ಪಂಜಾಬ್, ಕೇರಳದ ರೈತರ ಮಾದರಿಯಲ್ಲಿ ಹೋರಾಟವನ್ನು ನಡೆಸಲಾಗುವುದು ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.
https://www.facebook.com/share/v/6E7dWEnYrfFyZuQo/?mibextid=oFDknk

Leave a reply