ಚಿಕ್ಕಮಗಳೂರು : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಚಿಕ್ಕಮಗಳೂರು ಜಿಲ್ಲೆಯ ಹಸಿವು ಮತ್ತು ಭಯ ಮುಕ್ತ ಚಳುವಳಿಯಾಗಿರುವ ಎಸ್ಡಿಪಿಐ ಪಕ್ಷದ 2024-27 ಅವಧಿಗೆ ನಡೆದ ಆಂತರಿಕ ಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಬ್ರಾಂಚ್ ಪದಾಧಿಕಾರಿಗಳು ಮತ್ತು ಬ್ಲಾಕ್ ಸಮಿತಿಗಳ ಸದಸ್ಯರುಗಳ ನಾಯಕರುಗಳ ಸಭೆ ಜಿಲ್ಲಾ ಕಛೇರಿಯಲ್ಲಿ ಜರುಗಿತು. ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಬಾಸ್ಕರ್ ಪ್ರಸಾದ್ ರವರು ಪ್ರಸ್ತುತ ಸನ್ನಿವೇಶದಲ್ಲಿ ಪರ್ಯಾಯ ರಾಜಕಾರಣದ (Alternative politics) ಅಗತ್ಯತೆ ಮತ್ತು ಅಪ್ಸರ್ ಕೊಡ್ಲಿಪೇಟೆ ರವರು ಪರಿಣಾಮಕಾರಿ ನಾಯಕತ್ವ ದ ಬಗ್ಗೆ ತರಗತಿಗಳನ್ನು ನೀಡಿದರು.

ಈ ಸಂಧರ್ಭದಲ್ಲಿ ನಾಯಕರುಗಳನ್ನು ಉದ್ದೇಶಿಸಿ ಮಾತನಾಡಿದ ಎಸ್ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಭಾಸ್ಕರ್ ಪ್ರಸಾದ್ ಅವರು ನೂತನವಾಗಿ ಆಯ್ಕೆಯಾಗಿರುವ ನಾಯಕರುಗಳು ಸ್ಥಳೀಯ ಜನರ ಸಮಸ್ಯೆಗಳ ಬಗ್ಗೆ ಗಮನ ಹರಿಸಿ ಹೋರಾಟ ಮಾಡುವ ಮೂಲಕ ಅವರ ಆಶೋತ್ತರಗಳಿಗೆ ಸ್ಪಂದಿಸುವ ಮೂಲಕ ಪಕ್ಷವನ್ನು ತಳಮಟ್ಟದಿಂದ ಬಲಪಡಿಸಬೇಕೆಂದು ಕಿವಿಮಾತು ಹೇಳಿದರು.

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಒಟ್ಟು 27000 ಎಕರೆಗೂ ಹೆಚ್ಚು ಅರಣ್ಯ, ಸ್ಮಶಾನ, ಗೋಮಾಳ, ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದು, ಅರಣ್ಯ ಒತ್ತುವರಿ ತೆರವಿಗೆ ರಾಜ್ಯ ಅರಣ್ಯ ಸಚಿವರು ಈ ಹಿಂದೆ ಖಡಕ್ ಸೂಚನೆ ನೀಡಿದ್ದರು. ಹಾಗೂ ಸುಪ್ರೀಂ ಕೋರ್ಟ್ ನ ಹಸಿರು ಪೀಠವು ಮೀಸಲು ಅರಣ್ಯ ಒತ್ತುವರಿ ತೆರವುಗೊಳಿಸಬೇಕು ಇಲ್ಲದೆ ಹೋದರೆ ಸಂಬಂಧಿಸಿದ ಅರಣ್ಯಾಧಿಕಾರಿಗಳನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹಲವು ಪ್ರಕರಣಗಳಲ್ಲಿ ಪುನರುಚ್ಚರಿಸುತ್ತಲೇ ಬಂದಿದೆ. ಹಾಗೂ ನ್ಯಾಯಲಯಗಳಲ್ಲಿ ಅರಣ್ಯ ಇಲಾಖೆಯ ಪರವಾಗಿಯೆ ತೀರ್ಪುಗಳು ಬಂದಿದೆ. ಸರ್ಕಾರಿ ಜಮೀನುಗಳ ಒತ್ತುವರಿ ತೆರವುಗೊಳಿಸಿದ ಪ್ರಕರಣದಲ್ಲಿ ನಕಲಿ ದಾಖಲೆಗಳನ್ನು ಸೃಷ್ಟಿಸಿ ಕಾನೂನು ಬಧ್ಧಗೊಳಿಸಿರುವ ಅಕ್ರಮ ಒತ್ತುವರಿದಾರರ ವಿರುದ್ಧ ಭೂಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಪ್ರಕರಣದಲ್ಲಿ ಅಕ್ರಮ ಒತ್ತುವರಿದಾರರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು, ಅರಣ್ಯ ಇಲಾಖೆ ಅಧಿಕಾರಿಗಳು.. ಜೀವನೋಪಾಯಕ್ಕಾಗಿ ಅಲ್ಪಸ್ವಲ್ಪ ಒತ್ತುವರಿ ಮಾಡಿರುವವರನ್ನು ಬಿಡಿಸುವ ಮುನ್ನ ನೂರಾರು ಎಕರೆಗು ಹೆಚ್ಚು ಅರಣ್ಯ ಒತ್ತುವರಿ ಮಾಡಿರುವ ಪ್ರಭಾವಿಗಳನ್ನು ಬಿಡಿಸುವ ಕೆಲಸ ಮಾಡಬೇಕು ಎಂದು SDPI ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಆರ್ ಭಾಸ್ಕರ್ ಪ್ರಸಾದ್ ರವರು ಆಗ್ರಹಿಸಿದರು.

ಈ ಸಭೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷರಾದ ಗೌಸ್ ಮುನೀರ್ , ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಜಮೀಲ್ ಅಹ್ಮದ, ಮುಬಾರಕ್ ಮೂಡಿಗೆರೆ ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷ ಅಂಗಡಿ ಚಂದ್ರು, ಕಡೂರು ಮತ್ತು ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ ಸಮಿತಿ ಅಧ್ಯಕ್ಷರಾದ ಮೊಹಮ್ಮದ್ ಜೀಲಾನ್, ಕಡೂರು ವಿಧಾನಸಭಾ ಕ್ಷೇತ್ರ ಅಧ್ಯಕ್ಷರಾದ ಆಫ್ರೀದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Leave a reply