ಬೆಂಗಳೂರು : ತಿರುಪತಿ ತಿಮ್ಮಪ್ಪನ ಲಡ್ಡು ಪ್ರಸಾದ ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬು ಇರುವುದು ಪರೀಕ್ಷೆಯಲ್ಲಿ ದೃಢಪಟ್ಟಿದೆ ಎಂಬ ಆಂದ್ರಪ್ರದೇಶದ ಸಿಎಂ ಚಂದ್ರಬಾಬು ನಾಯ್ಡು ಹೇಳಿಕೆ ದೇಶಾದ್ಯಂತ ಸಂಚಲನ ಮೂಡಿಸಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ರಾಜ್ಯದಲ್ಲಿ ದೇವಸ್ಥಾನ ಮಂಡಳಿಯ ಅಧೀನದಲ್ಲಿರುವ 34,000 ದೇವಸ್ಥಾನಗಳಲ್ಲಿ ಕರ್ನಾಟಕ ಮಿಲ್ಕ್ ಫೆಡರೇಷನ್ (ಕೆಎಂಎಫ್) ಉತ್ಪಾದಿಸುವ ನಂದಿನಿ ತುಪ್ಪವನ್ನು ಮಾತ್ರವೇ ಬಳಸಬೇಕೆಂದು ಆದೇಶಿಸಿದೆ.
ಈ ಹಿನ್ನೆಲೆಯಲ್ಲಿ, ದೇವಸ್ಥಾನಗಳಲ್ಲಿ ದೀಪಗಳನ್ನು ಹಚ್ಚುವುದು, ಪ್ರಸಾದ ತಯಾರಿಕೆ ಮತ್ತು ಇತರೆ ಧಾರ್ಮಿಕ ಕಾರ್ಯಗಳಿಗೆ ನಂದಿನಿ ತುಪ್ಪವನ್ನು ಮಾತ್ರವೇ ಬಳಸಬೇಕೆಂದು ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಭಕ್ತರಿಗೆ ಆಹಾರ ಮತ್ತು ಪ್ರಸಾದದ ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳದಂತೆ ದೇವಸ್ಥಾನದ ಸಿಬ್ಬಂದಿಗೆ ಸೂಚನೆ ನೀಡಿದೆ.
ಕರ್ನಾಟಕ ರಾಜ್ಯದಲ್ಲಿರುವ ದೇವದಾಯ ಇಲಾಖೆಯು ಅಧಿಸೂಚಿಸಿರುವ ಎಲ್ಲಾ ದೇವಾಲಯಗಳಲ್ಲಿ ಸೇವೆಗಳು, ದೀಪಗಳು ಮತ್ತು ಎಲ್ಲಾ ರೀತಿಯ ಪ್ರಸಾದಗಳನ್ನು ತಯಾರಿಸಲು ಮತ್ತು ದಾಸೋಹ ಭವನದಲ್ಲಿ ಧಾರ್ಮಿಕ ಕಾರ್ಯಗಳಿಗೆ ನಂದಿನಿ ತುಪ್ಪವನ್ನು ಮಾತ್ರವೇ ಬಳಸಬೇಕು. ದೇವಸ್ಥಾನಗಳಲ್ಲಿ ತಯಾರಾಗುವ ಪ್ರಸಾದದ ಗುಣಮಟ್ಟ ಕಾಯ್ದುಕೊಳ್ಳಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.
Leave a reply