ನ್ಯೂಡೆಲ್ಲಿ : ಪಂಜಾಬ್ ಮತ್ತು ಹರಿಯಾಣದ ರೈತರನ್ನು ದೆಹಲಿಯ ಗಡಿಯಲ್ಲಿ ಪೊಲೀಸರು ತಡೆದರು. ರೈತರು ದೆಹಲಿ ಪ್ರವೇಶಿಸದಂತೆ ಬ್ಯಾರಿಕೇಡ್ ಮತ್ತು ಬೇಲಿಗಳನ್ನು ನಿರ್ಮಿಸಲಾಗಿದ್ದು, ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಲಾಗಿದೆ. ಶಂಭು ಗಡಿಯಲ್ಲಿ ಹರಿಯಾಣ ಪೊಲೀಸರು ರೈತರ ಮೇಲೆ ಅಶ್ರುವಾಯು ಪ್ರಯೋಗಿಸಿದ್ದಾರೆ.
ಪಂಜಾಬ್ ಮತ್ತು ಹರಿಯಾಣ ಗಡಿ ಭಾಗಗಳಲ್ಲಿ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಶುಕ್ರವಾರ ಮಧ್ಯಾಹ್ನ 1 ಗಂಟೆಗೆ ಶಂಭು ಗಡಿಯಿಂದ 101 ಮಂದಿ ರೈತರ ಜಾಥಾ (ಡೆಲ್ಲಿ ಮಾರ್ಚ್) ಆರಂಭವಾಯಿತು. ಗುಂಪು ಗುಂಪಾಗಿ ಗಡಿಭಾಗಕ್ಕೆ ಬರುತ್ತಿದ್ದ ರೈತರನ್ನು ಹರಿಯಾಣ ಪೊಲೀಸರು ತಡೆಹಿಡಿದಿದ್ದಾರೆ. ಬಿಎನ್ಎಸ್ಎಸ್ನ ಸೆಕ್ಷನ್ 163 ರ ಅಡಿಯಲ್ಲಿ ನಾಲ್ಕು ಜನರಿಗಿಂತ ಹೆಚ್ಚು ಜನರ ಸಭೆ ನಡೆಸಬಾರದು ಎಂದು ನಿಷೇಧಾಜ್ಞೆ ವಿಧಿಸಿರುವುದಾಗಿ ತಿಳಿಸಿದ್ದಾರೆ.
ಹರ್ಯಾಣ ಸರ್ಕಾರ ರೈತ ಜಾತವನ್ನು ತಡೆಯಲು ತೀವ್ರವಾಗಿ ಪ್ರಯತ್ನಿಸುತ್ತಿದೆ. ಅಂಬಾಲಾ ಜಿಲ್ಲೆಯ 11 ಗ್ರಾಮಗಳಲ್ಲಿ ಡಿಸೆಂಬರ್ 9 ರವರೆಗೆ ಮೊಬೈಲ್ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ ವಿಭಾಗ), ಕಿಸಾನ್ ಮಜ್ದೂರ್ ಮೋರ್ಚಾ ಬ್ಯಾನರ್ ಅಡಿಯಲ್ಲಿ ರೈತರು ಸಮಾವೇಶಗೊಳುತ್ತಿದ್ದಾರೆ. ಫೆಬ್ರವರಿ 13 ರಿಂದ, ಅವರು ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಮತ್ತು ಖಾನೌರಿ ಗಡಿಯಲ್ಲಿ ತಂಗಿದ್ದಾರೆ. ಕನಿಷ್ಠ ಬೆಂಬಲ ಬೆಲೆ (MSP)ಗೆ ಕಾನೂನುಬದ್ಧತೆಯ ಖಾತರಿಯೊಂದಿಗೆ 12 ಭರವಸೆಗಳನ್ನು ಈಡೇರಿಸುವಂತೆ ಒತ್ತಾಯಿಸುತ್ತಿದ್ದಾರೆ.
Leave a reply