ಬೆಂಗಳೂರು : ಇತ್ತೀಚೆಗೆ ಬೆಳಗಾವಿಯಲ್ಲಿ ಮಹಾರಾಷ್ಟ್ರದ ಮರಾಠಿ ಪುಂಡರು ನಡೆಸಿದ ಹಟ್ಟಹಾಸ, ವಿವಿಧ ನದಿ ಯೋಜನೆಗಳ ಆರಂಭಕ್ಕೆ ಆಗ್ರಹಿಸಿ ಮಾರ್ಚ್, 22ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಒಕ್ಕೂಟದ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.
ಬೆಳಗಾವಿಯಲ್ಲಿ ಮರಾಠಿಗರ ಪುಂಡಾಟಿಕೆ, ಅಟ್ಟಹಾಸ, ಎಂಇಎಸ್ ನಿಷೇಧಿಸಬೇಕು. ಕಳಸಾ-ಬಂಡೂರಿ ಮಹದಾಯಿ ಯೋಜನೆಯನ್ನು ಕೂಡಲೇ ಆರಂಭ ಮಾಡಬೇಕು. ಹಿಂದಿ ಹೇರಿಕೆ ಕೈ ಬಿಡಬೇಕು. ಕಲ್ಯಾಣ ಕರ್ನಾಟಕ ಅಭಿವೃದ್ಧಿಯಾಗಬೇಕು. ಕನ್ನಡ ಕಂಡಕ್ಟರ್ ಮೇಲೆ ಮರಾಠಿಗರ ದಾಳಿಯ ಕುರಿತು ಸಮಗ್ರವಾಗಿ ತನಿಖೆ ಆಗಬೇಕು. ಮೇಕೆದಾಟು ಬಗ್ಗ ತಮಿಳುನಾಡು ವಿರೋಧ, ಕೇಂದ್ರ ಸರ್ಕಾರ ಹಾಗೂ ತಮಿಳುನಾಡು ನೀತಿ ವಿರೋಧಿಸಿ ಹಾಗೂ ಚಾಲಕರಿಗೆ ಶಕ್ತಿ ತುಂಬಲು ದಿನಾಂಕ 22-03-2025ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಚಳುವಳಿಯ ವಾಟಾಳ್ ನಾಗರಾಜ್ ಕರೆ ನೀಡಿದ್ದಾರೆ.
ಇದಕ್ಕೂ ಪೂರ್ವದಲ್ಲಿ ಕರ್ನಾಟಕ ಬಂದ್ ಬಗ್ಗೆ ಇಂದು ಬೆಂಗಳೂರಿನ ವುಡ್ ಲ್ಯಾಂಡ್ಸ್ ಹೋಟೆಲ್ ಸಭಾಂಗಣದಲ್ಲಿ ಕನ್ನಡಪರ ಸಂಘಟನೆಗಳ ನಾಯಕರೊಂದಿಗೆ ವಾಟಾಳ್ ನಾಗರಾಜ್ ಅವರು ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಮಾರ್ಚ್.22ರ ಅಖಂಡ ಕರ್ನಾಟಕ ಬಂದ್ ಮಾಡುವಂತ ಅಧಿಕೃತ ನಿರ್ಧಾರವನ್ನು ಕೈಗೊಂಡು, ಪ್ರಕಟಿಸಿದರು.
ನಾಳೆ ಬಂದ್ ವೇಳೆ ಏನಿರುತ್ತೆ ಏನಿರಲ್ಲ?
- ಬಂದ್ಗೆ ರಾಜ್ಯ ಸರ್ಕಾರ ಬೆಂಬಲ ಸೂಚಿಸದ ಹಿನ್ನೆಲೆ ಬಸ್, ಆಟೋ ಸಂಚಾರ ಎಂದಿನಂತೆ ಇರಲಿದೆ. ಶಾಲಾ-ಕಾಲೇಜುಗಳು, ಸರ್ಕಾರಿ ಕಚೇರಿಗಳು ತೆರೆದಿರಲಿದೆ.
- ಖಾಸಗಿ ಶಾಲೆಗಳ ಒಕ್ಕೂಟ ಬಂದ್ಗೆ ನೈತಿಕ ಬೆಂಬಲ ಸೂಚಿಸಿದ್ದೇ ಆದರೂ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದಿಲ್ಲ ಎಂದು ತಿಳಿಸಿದೆ. ಪ್ರಸ್ತುತ ಮಕ್ಕಳಿಗೆ ಪರೀಕ್ಷೆಗಳು ನಡೆಯುತ್ತಿದ್ದು, ರಜೆ ಕೊಡಲು ಮುಂದಾಗುವುದಿಲ್ಲ ಎಂದು ತಿಳಿಸಿದೆ.
- ಮಾ.22 ನಾಲ್ಕನೇ ಶನಿವಾರ ಆದ ಹಿನ್ನೆಲೆ ಸರ್ಕಾರಿ ಕಚೇರಿಗಳು ಮತ್ತು ಬ್ಯಾಂಕ್ಗಳು ಕೂಡ ರಜೆ ಇರಲಿವೆ.
- ಬಿಎಂಟಿಸಿ, ನಮ್ಮ ಮೆಟ್ರೋ, ಕೆಎಸ್ಆರ್ಟಿಸಿ, ಆಸ್ಪತ್ರೆ ವೈದ್ಯಕೀಯ ಸೇವೆಗಳು, ಉಪಹಾರ ಕ್ಯಾಂಟೀನ್, ಹೋಟೆಲ್ಗಳು, ಶಾಲಾ-ಕಾಲೇಜು, ರೆಸ್ಟೋರೆಂಟ್, ಪಬ್ಗಳು ತೆರದಿರಲಿವೆ.
- ಚಿತ್ರಮಂದಿರಗಳಲ್ಲಿ ಬೆಳಗ್ಗಿನ ಆಟ ನಡೆಯುವುದಿಲ್ಲ. ಮೊದಲ ಪ್ರದರ್ಶನ ಇರುವುದಿಲ್ಲ.
- ಓಲಾ, ಊಬರ್ ಆಟೋ, ಟ್ಯಾಕ್ಸಿ ಸೇವೆಗಳಲ್ಲಿ ವ್ಯತ್ಯಯ ಆಗಬಹುದು .
Leave a reply