ಬೆಂಗಳೂರು : ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ನಿಧನರಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಂದು ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದೆ. ಹಲವು ವಿಶ್ವವಿದ್ಯಾಲಯಗಳ ಇಂದಿನ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ.
ಮಾಜಿ ಪ್ರಧಾನಮಂತ್ರಿ ಡಾ. ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ, ಅವರ ಗೌರವಾರ್ಥ ರಾಜ್ಯ ಸರ್ಕಾರ ಸಾರ್ವಜನಿಕ ರಜೆ ಘೋಷಿಸಿರುವುದರಿಂದ ಡಿ. 27ರಂದು ನಡೆಯಬೇಕಿದ್ದ ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ Non-NEP ಪದವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಪರೀಕ್ಷೆಯ ಮುಂದಿನ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಉಪಕುಲಸಚಿವ ಡಾ. ಪಿ. ಧರಣಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆ ಇಂದು ನಡೆಯಬೇಕಿತ್ತು. ಆದರೆ, ರಜೆಯ ಕಾರಣದಿಂದಾಗಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಪರೀಕ್ಷೆಯ ಮುಂದಿನ ದಿನಾಂಕವನ್ನು ವೆಬ್ ಸೈಟ್ ನಲ್ಲಿ ತಿಳಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವರು ತಿಳಿಸಿದ್ದಾರೆ.

Leave a reply